ದೇವರ ಕೃಪೆಯು ಯೇಸುವಿನ ಮೂಲಕ ಪ್ರಕಟವಾದದ್ದು(ಬಂದಿದ್ದು) ಎಂದು ಪವಿತ್ರ ಗ್ರಂಥವು ಹೇಳುತ್ತದೆ.
ದೇವರ ಸಮೃದ್ಧಿಯನ್ನು ಗಳಿಸಿಕೊಳ್ಳಲು ನಾವು ಏನನ್ನೂ ಮಾಡಲು ಸಾಧ್ಯವಿಲ್ಲ – ಅದನ್ನು ಆತನ ಕೃಪೆ ಮತ್ತು ಆತನ ಮಗನಾದ ಯೇಸು ಕ್ರಿಸ್ತನನ್ನು ನಂಬುವವರಿಗೆ ನೀಡಲಾಗುವುದು.
ಅವರು ನೀತಿವಂತರೆಂದು ನಿರ್ಣಯ ಹೊಂದುವದು ಆತನ ಉಚಿತಾರ್ಥವಾದ ಕೃಪೆಯಿಂದಲೇ. ಇದು ಕ್ರಿಸ್ತ ಯೇಸುವಿನಿಂದಾದ ವಿಮೋಚನೆಯ ಮೂಲಕವಾಗಿ ಆಗುವದು.
ಆತನ ಸಂಪೂರ್ಣತೆಯೊಳಗಿಂದ ನಾವೆಲ್ಲರೂ ಕೃಪೆಗಾಗಿ ಕೃಪೆಯನ್ನು ಹೊಂದಿದೆವು.
ನ್ಯಾಯಪ್ರಮಾಣವು ಮೋಶೆಯ ಮುಖಾಂತರ ವಾಗಿ ಕೊಡಲ್ಪಟ್ಟಿತು; ಆದರೆ ಕೃಪೆಯೂ ಸತ್ಯವೂ ಯೇಸು ಕ್ರಿಸ್ತನ ಮುಖಾಂತರವಾಗಿ ಬಂದವು.
ಯಾವನೂ ಯಾವ ಕಾಲದಲ್ಲೂ ದೇವರನ್ನು ಕಂಡಿಲ್ಲ. ತಂದೆಯ ಎದೆಯಲ್ಲಿರುವ ಆ ಒಬ್ಬನೇ ಮಗನಾಗಿರುವಾತನು ಆತನನ್ನು ತಿಳಿಯಪಡಿಸಿದ್ದಾನೆ.
”ಆದ್ದರಿಂದ ನೀವು ನಂಬಿಕೆಯ ಮೂಲಕ ದೇವರ ಕೃಪೆಯಿಂದಲೇ ರಕ್ಷಣೆ ಹೊಂದಿದವರಾಗಿದ್ದೀರಿ. ಆ ರಕ್ಷಣೆಯು ನಿಮ್ಮಿಂದ ಉಂಟಾದದ್ದಲ್ಲ, ಅದು ದೇವರ ವರ. ನಿಮಗೆ ರಕ್ಷಣೆ ದೊರೆತದ್ದು ನಿಮ್ಮ ಒಳ್ಳೆಯ ಕಾರ್ಯಗಳಿಂದಲ್ಲ. ಆದ್ದರಿಂದ ತನ್ನನ್ನು ತಾನೇ ರಕ್ಷಿಸಿಕೊಂಡಿರುವುದಾಗಿ ಯಾರೂ ಹೊಗಳಿಕೊಳ್ಳಲು ಸಾಧ್ಯವಿಲ್ಲ….”( ಎಫೆಸಿ 2:8-9)
January 14
Enter his gates with thanksgiving and his courts with praise; give thanks to him and praise his name. —Psalm 100:4. As we continue reflecting on the call to worship in