ನಿಮ್ಮ ಜೀವನದಲ್ಲಿ ಯಾವುದು ಮುಖ್ಯ ಎಂಬುದನ್ನು ನಿರ್ಧರಿಸಿ, ಅದನ್ನು ನೀವು ನಿರ್ಧಾರ ಮಾಡದಿದ್ದರೆ, ಇತರ ಜನರು ನಿಮಗಾಗಿ ನಿರ್ಧರಿಸುತ್ತಾರೆ – ಅವರು ನಿಮ್ಮನ್ನು ಅವರ ಅಚ್ಚಿಗೆ(ಸ್ವಭಾವಕ್ಕೆ) ತಳ್ಳುತ್ತಾರೆ ಮತ್ತು ನೀವು ಅವರ ಮೌಲ್ಯಗಳಿಂದ ನಿಮ್ಮ ಜೀವನವನ್ನು ನಡೆಸುತ್ತೀರಿ ಹೊರೆತು ನಿಮ್ಮ ಮೌಲ್ಯಗಳಿಂದಲ್ಲ.
ಪ್ರಿಯ ಸ್ನೇಹಿತರೇ, ನೀವು ಈಗಾಗಲೇ ಇದರ ಬಗ್ಗೆ ತಿಳಿದಿರುವಿರಿ. ಆದ್ದರಿಂದ ನೀವು ಎಚ್ಚರದಿಂದಿರಿ. ಆ ಕೆಟ್ಟಜನರು ತಾವು ಮಾಡುವ ಕೆಟ್ಟಕಾರ್ಯಗಳಿಂದ ನಿಮ್ಮನ್ನು ದಾರಿತಪ್ಪಿಸದಂತೆ ನೋಡಿಕೊಳ್ಳಿರಿ. ನಿಮ್ಮ ಬಲವಾದ ನಂಬಿಕೆಯನ್ನು ತೊರೆದುಬಿಡದಂತೆ ಎಚ್ಚರಿಕೆಯಾಗಿರಿ. ನಿಮ್ಮ ಪ್ರಭುವಾದ ಮತ್ತು ರಕ್ಷಕನಾದ ಯೇಸು ಕ್ರಿಸ್ತನ ಕೃಪೆಯಲ್ಲಿಯೂ ತಿಳುವಳಿಕೆಯಲ್ಲಿಯೂ ಬೆಳೆಯುತ್ತಲೇ ಇರಿ. ಆತನಿಗೆ ಈಗಲೂ ಎಂದೆಂದಿಗೂ ಮಹಿಮೆಯಾಗಲಿ! ಆಮೆನ್.
ದೇವರ ಸಮಾಧಾನವು ನಿಮ್ಮ ಹೃದಯಗಳಲ್ಲಿ ಆಳಲಿ; ಅದಕ್ಕಾಗಿಯೇ ನೀವು ಸಹ ಒಂದೇ ದೇಹವಾಗಿರುವಂತೆ ಕರೆಯಲ್ಪಟ್ಟಿದ್ದೀರಿ; ಇದಲ್ಲದೆ ನೀವು ಕೃತಜ್ಞತೆಯುಳ್ಳವರಾಗಿರ್ರಿ.
ನೀವು ನುಡಿಯಿಂದಾಗಲಿ, ನಡೆಯಿಂದಾಗಲಿ ಏನು ಮಾಡಿದರೂ ಅದೆಲ್ಲವನ್ನೂ ನಿಮ್ಮ ಪ್ರಭುವಾದ ಯೇಸುವಿಗಾಗಿ ಮಾಡಿರಿ. ನೀವು ಏನು ಮಾಡಿದರೂ ಯೇಸುವಿನ ಮೂಲಕ ತಂದೆಯಾದ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಿರಿ.
’’ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಋಣವೇ ಹೊರತು ಬೇರೆ ಯಾವ ಸಾಲವೂ ನಿಮಗೆ ಇರಬಾರದು. ಮತ್ತೊಬ್ಬರನ್ನು ಪ್ರೀತಿಸುವವನು ನ್ಯಾಯಪ್ರಮಾಣವನ್ನೆಲ್ಲಾ ನೆರವೇರಿಸಿದ್ದಾನೆ. ಹೇಗಂದರೆ ವ್ಯಭಿಚಾರ ಮಾಡಬಾರದು, ನರಹತ್ಯ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳಬಾರದು, ಆಶಿಸಬಾರದು ಈ ಮೊದಲಾದ ಎಲ್ಲಾ ಕಟ್ಟಳೆಗಳು–ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು ಎಂಬ ಒಂದೇ ಮಾತಿನಲ್ಲಿ ಅಡಕವಾಗಿವೆ. ಪ್ರೀತಿಯು ತನ್ನ ನೆರೆಯವನಿಗೆ ಯಾವ ಕೇಡನ್ನೂ ಮಾಡುವದಿಲ್ಲ. ಆದಕಾರಣ ಪ್ರೀತಿಯಿಂದಲೇ ನ್ಯಾಯಪ್ರಮಾಣವು ನೆರವೇರುತ್ತದೆ….…’’ (ರೋಮ 13:8-10)
March 31
Now to him who is able to do immeasurably more than all we ask or imagine, according to his power that is at work within us, to him be glory